rtgh

ವಿದ್ಯಾರ್ಥಿಗಳಿಗಾಗಿ HDFC ಕಡೆಯಿಂದ 75,000 ಸ್ಕಾಲರ್ಶಿಪ್ , ಅರ್ಹತೆ ತಿಳಿದುಕೊಳ್ಳಿ

ನಮಸ್ಕಾರ ಸ್ನೇಹಿತರೆ ವಿದ್ಯಾರ್ಥಿಗಳಿಗೆ ಹಾಗೂ ರೈತರಿಗೆ ಸಹಾಯವಾಗುವಂತಹ ಮಾಹಿತಿಯನ್ನು ನೀಡಲಾಗುತ್ತಿದ್ದು ಇವತ್ತಿನ ಲೇಖನದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನ ಮಾಹಿತಿಯನ್ನು ತಿಳಿಸಲಾಗುತ್ತಿದೆ. ಎಚ್ ಡಿ ಎಫ್ ಸಿ ಬ್ಯಾಂಕ್ ನವತಿಯಿಂದ 75,000ಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಈ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾದರೆ ಏನಿಲ್ಲ ಅರ್ಹತೆಗಳು ಇರಬೇಕು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತಿದೆ.

Scholarship from HDFC for students
Scholarship from HDFC for students

ಎಚ್ ಡಿ ಎಫ್ ಸಿ ಬ್ಯಾಂಕ್ ನಿಂದ ಸ್ಕಾಲರ್ಶಿಪ್ :

ದೇಶದ ಖಾಸಗಿ ಬ್ಯಾಂಕುಗಳಲ್ಲಿ ಒಂದಾದ ಎಸ್ ಟಿ ಎಫ್ ಸಿ ಬ್ಯಾಂಕ್ ಗ್ರಾಹಕರ ಅತ್ಯಂತ ನಂಬಿಕೆಯ ಬ್ಯಾಂಕ್ ಆಗಿದೆ ಎಂದು ಹೇಳಬಹುದು. ಆರ್ಥಿಕ ಸಮಸ್ಯೆಯಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗದೇ ಇರುವಂತಹ ವಿದ್ಯಾರ್ಥಿಗಳಿಗೆ ಈ ಒಂದು ಬ್ಯಾಂಕ್ ಆರ್ಥಿಕ ಸಹಾಯವನ್ನು ಮಾಡುವಂತಹ ಉದ್ದೇಶವನ್ನು ಹೊಂದಿದ್ದು ಅರ್ಹತೆ ಹೊಂದಿರುವ ಎಲ್ಲಾ ವಿದ್ಯಾರ್ಥಿಗಳಿಗೆ 75,000ಗಳ ವರೆಗೆ ವಿದ್ಯಾರ್ಥಿ ವೇತನವನ್ನು ನೀಡಲು ನಿರ್ಧರಿಸಿದೆ.

ಸ್ಕಾಲರ್ಶಿಪ್ ಪಡೆಯಲು ಇರುವ ಅರ್ಹತೆಗಳು :

ಹೆಚ್ ಡಿ ಎಸ್ ಸಿ ಬ್ಯಾಂಕ್ನಿಂದ ನೀಡುತ್ತಿರುವ ಈ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾದರೆ ವಿದ್ಯಾರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳೆಂದರೆ ವಿದ್ಯಾರ್ಥಿಯು ಭಾರತೀಯರಾಗಿದ್ದು ಭಾರತ ದೇಶದಲ್ಲಿಯೇ ವಿದ್ಯಾಭ್ಯಾಸ ಮಾಡುತ್ತಿರಬೇಕಾಗುತ್ತದೆ. ಒಂದನೇ ತರಗತಿಯಿಂದ ಸ್ನಾನಕೋತ್ತರ ಪದವಿ ಪಡೆಯುತ್ತಿರುವವರೆಗೂ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯವು ಅರ್ಜಿ ಸಲ್ಲಿಸಲು ಎರಡುವರೆ ಲಕ್ಷ ರೂಪಾಯಿಗಿಂತ ಹೆಚ್ಚಿರಬಾರದು. ಹಿಂದಿನ ಶೈಕ್ಷಣಿಕ ವರ್ಷದ ಅಂಕವು 55% ಗಿಂತ ಹೆಚ್ಚಿರಬೇಕಾಗುತ್ತದೆ.

ಇದನ್ನು ಓದಿ : ಮತ್ತೊಮ್ಮೆ ರೇಷನ್ ಕಾರ್ಡ್ ತಿದ್ದುಪಡಿ ಪ್ರಕ್ರಿಯೆ 15 ದಿನ ಕಾಲಾವಕಾಶ

ಅರ್ಜಿ ಸಲ್ಲಿಸಲು ಇರುವಾಗ ಅಗತ್ಯ ದಾಖಲೆಗಳು :

ಎಚ್ ಡಿ ಎಫ್ ಸಿ ಬ್ಯಾಂಕ್ ನ ವಿದ್ಯಾರ್ಥಿ ವೇತನಕ್ಕೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು ಅವುಗಳೆಂದರೆ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಅಥವಾ ಇತರೆ ಯಾವುದೇ ಐಡೆಂಟಿಟಿ ಕಾರ್ಡ್ ಅನ್ನು ಹೊಂದಿರಬೇಕು. ಹಿಂದಿನ ಶೈಕ್ಷಣಿಕ ವರ್ಷದ ಮಾರ್ಕ್ಸ್ ಕಾರ್ಡ್ ಬ್ಯಾಂಕ್ ಪಾಸ್ ಬುಕ್ ಆದಾಯ ಪ್ರಮಾಣ ಪತ್ರ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸುವ ವಿಧಾನ :

ಹೆಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು ವಿದ್ಯಾರ್ಥಿಗಳು ಹೆಚ್‌ಡಿಎಫ್‍ಸಿ ಬ್ಯಾಂಕ್ ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ https://www.buddy4study.com/page/hdfc-bank-parivartans-ecss-programme ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಒಟ್ಟಾರೆ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ುಂದುವರಿಸುವ ಉದ್ದೇಶದಿಂದ ಹೆಚ್‌ಡಿಎಫ್ಸಿ ಬ್ಯಾಂಕ್ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ಬಗ್ಗೆ ನಿಮ್ಮ ಸ್ನೇಹಿತರ ಮಕ್ಕಳು ಯಾರಾದರೂ ವಿದ್ಯಾರ್ಥಿಗಳಾಗಿದ್ದರೆ ಹಾಗೂ ನಿಮಗೆ ತಿಳಿದಿರುವ ವಿದ್ಯಾರ್ಥಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡುವ ಮೂಲಕ ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಎಂದು ತಿಳಿಸಿ ಧನ್ಯವಾದಗಳು.

ಇತರೆ ವಿಷಯಗಳು :

Leave a Comment