rtgh

ಕರ್ನಾಟಕದಲ್ಲಿ ಅಂಗನವಾಡಿ ಟೀಚರ್ ಹುದ್ದೆಗೆ ಅಹ್ವಾನ , ವಿದ್ಯಾರ್ಹತೆ ಏನು .?

ನಮಸ್ಕಾರ ಸ್ನೇಹಿತರೆ SSLC ಮತ್ತು PUC ಪಾಸಾದ ಅರ್ಹ ಮಹಿಳೆಯರು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದ್ದು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಕರ್ನಾಟಕ ಸರ್ಕಾರವು ಅರ್ಜಿ ಆಹ್ವಾನ ಮಾಡಿದೆ. ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಬರ್ತಿದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಿಂದ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಮಿನಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ.

Anganwadi Teacher Post
Anganwadi Teacher Post

ಈ ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನ :

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕ್ಕೆ ಹುದ್ದೆಗಳಿಗೆ ಅರ್ಜಿಯನ್ನು ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಬೀದರ್ ಬೆಳಗಾವಿ ಹಾವೇರಿ ತಾಲೂಕ ಜಿಲ್ಲೆಗಳಲ್ಲಿ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ ಹುದ್ದೆಯನ್ನು ಪಡೆಯಬಹುದಾಗಿದೆ.

ಕಾರ್ಯಕರ್ತೆಯರ ವಿದ್ಯಾರ್ಹತೆ :

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಕನಿಷ್ಠ ಪಿಯುಸಿ ಪಾಸ್ ಆಗಿರಬೇಕು ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ದ್ವಿತೀಯ ಭಾಷೆಯನ್ನಾಗಿ ಓದಿರಬೇಕಾಗುತ್ತದೆ. ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ತರಗತಿಯಲ್ಲಿ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಕನಿಷ್ಠ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.

ನಿಮ್ಮ ವಯಸ್ಸಿನ ಮಿತಿ :

19 ರಿಂದ 35 ವರ್ಷ ವಯೋಮಿತಿಯೊಳಗೆ ಇರುವ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 10 ವರ್ಷಗಳವರೆಗೆ ವಿಕಲಚೇತನರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಪ್ರಮುಖ ದಿನಾಂಕಗಳು :ದಿನಾಂಕ ಎಲ್ಲಿ ಅರ್ಜಿ ಸಲ್ಲಿಸಬೇಕು
ಅರ್ಜಿಯನ್ನು ಸಲ್ಲಿಸಲು ಪ್ರಾರಂಭಿಕದಿನಾಂಕ 10-01-2024ಆನ್ಲೈನ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 05-02-2024ONLINE

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು :

  1. ಜನನ ಪ್ರಮಾಣ .
  2. ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್.
  3. ವಿದ್ಯಾರ್ಹತೆಯ ಅಂಕಪಟ್ಟಿ.
  4. ವಾಸ ಸ್ಥಳ ದೃಢೀಕರಣ ಪತ್ರ.
  5. ಜಾತಿ ಪ್ರಮಾಣ ಪತ್ರ.
  6. ಪತಿ ಮರಣ ಹೊಂದಿದ್ದರೆ ಮರಣ ಪ್ರಮಾಣ ಪತ್ರ .
  7. ವಿಧವಾ ಪ್ರಮಾಣ ಪತ್ರ.
  8. ಆಧಾರ್ ಕಾರ್ಡ್.
  9. ಮತದಾರರ ಗುರುತಿನ ಚೀಟಿ .
  10. ರೇಷನ್ ಕಾರ್ಡ್.

ಅರ್ಜಿ ಸಲ್ಲಿಸುವ ವಿಧಾನ :

ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಹೀಗೆ ಕರ್ನಾಟಕ ಸರ್ಕಾರವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ವತಿಯಿಂದ ಶಿಷ್ಯ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಆಸಕ್ತರು ಅರ್ಜಿಯನ್ನು ಸಲ್ಲಿಸಿ ಉದ್ಯೋಗವನ್ನು ಪಡೆಯಬಹುದಾಗಿದೆ.

Leave a Comment